ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಲಾರಿ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಚಾಲಕ ಧಾರುಣವಾಗಿ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೇತಿಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಿವಪುರ ಗ್ರಾಮದ ಬಾಬು(30) ಮೃತ ಟಿಪ್ಪರ್ ಚಾಲಕನಾಗಿದ್ದಾನೆ.
ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಮುಂಜಾನೆ ನಸುಕಿನ ಜಾವದಲ್ಲಿ ತೆರಳುತ್ತಿದ್ದ ಟಿಪ್ಪರ್ ಹಾಳಾಗಿದ್ದು, ಚಾಲಕ ರಸ್ತೆ ಪಕ್ಕದಲ್ಲಿ ಟಿಪ್ಪರ್ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ. ಈ ವೇಳೆ ಹಿಂದಿನಿಂದ ಬಂದ ಕಂಟೇನರ್ ಲಾರಿ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಪೇರಿ ಕೆಲಸದಲ್ಲಿ ತೊಡಗಿದ್ದ ಟಿಪ್ಪರ್ ಚಾಲಕನ ಮೇಲೇ ಲಾರಿ ಹರಿದಿದೆ.
ಲಾರಿ ಹರಿದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಂಟೇನರ್ ಗುದ್ದಿದ ರಭಸಕ್ಕೆ ಟಿಪ್ಪರ್ ಲಾರಿ ರಸ್ತೆ ಪಕ್ಕದ ಕಾಲುವೆಗೆ ಹೋಗಿ ನಿಂತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment