ಗಿಲ್ ಭರ್ಜರಿ ಆಟ; ಕೊಲ್ಕತ್ತಾ ನೈಟ್ ರೈಡರ್ಸ್ ಗೆ 7 ವಿಕೆಟ್ ಜಯ

ಅಬುದಾಬಿ : ಶೇಖ್ ಜಾಯೆದ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 8ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಜರ್ಸ್ ಹೈದರಾಬಾದ್ ತಂಡದ ವಿರುದ್ಧ 7 ವಿಕೆಟ್ ಗಳ ಗೆಲುವು ದಾಖಲಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿದ 143 ರನ್ ಗಳ ಗುರಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಶುಭ್ ಮಾನ್ ಗಿಲ್ (70 ರನ್, 62 ಎಸೆತ), ನಿತೀಶ್ ರಾಣಾ (26 ರನ್, 13 ಎಸೆತ), ಇಯಾನ್ ಮಾರ್ಗನ್ (42 ರನ್, 29 ಎಸೆತ), ಅವರ ಆಟದ ನೆರವಿನಿಂದ 18 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಸನ್ ರೈಸರ್ಸ್ ತಂಡದ ವಿರುದ್ಧ 7 ವಿಕೆಟ್ ಗಳ ಗೆಲುವು ದಾಖಲಿಸಿತು. ಸನ್ ರೈಸರ್ಸ್ ತಂಡದ ಪರ ರಶೀದ್ ಖಾನ್, ಖಲೀಲ್ ಅಹಮದ್, ನಟರಾಜನ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ತಂಡ ನಾಯಕ ಡೇವಿಡ್ ವಾರ್ನರ್ (36 ರನ್, 30 ಎಸೆತ), ಮನೀಶ್ ಪಾಂಡೆ (51 ರನ್, 38 ಎಸೆತ), ವೃದ್ಧಿಮಾನ್ ಸಹಾ (30 ರನ್, 31 ಎಸೆತ) ಆಟದ ನೆರವಿನಿಂದ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ನೈಟ್ ರೈಡರ್ಸ್ ಪರ ಪ್ಯಾಟ್ ಕಮಿನ್ಸ್ , ರಸೆಲ್, ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆದರು.

Advertisement

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಭರ್ಜರಿ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಶುಭ್ ಮಾನ್ ಗಿಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement