ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆನೀಡಿದ್ದ ಸಾರಿಗೆ ಮುಷ್ಕರ ಹಿಂಪಡೆಯಲಾಗಿದೆ.
ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಭಾನುವಾರ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಇಲಾಖೆಯು 4 ನಿಗಮಗಳ ವ್ಯವಸ್ಥಾಪಕರು ಭಾಗಿಯಾಗಿದ್ದರು.
ನೌಕರರ ಸಮಸ್ಯೆ ಆಲಿಸಿದ ಸರ್ಕಾರ ಕೊನೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗಿದೆ. ಹೀಗಾಗಿ, ಸರ್ಕಾದ ಜತೆಗಿನ ಸಂಧಾನ ಸಫಲವಾಗಿದ್ದು, ಸಾರಿಗೆ ಮುಷ್ಕರ ಹಿಂಪಡೆದಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.