ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡಲಿದ್ದು, KSRTC ಬಸ್ ಟಿಕೆಟ್ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.
ಹೌದು, KSRTC ಬಸ್ ಟಿಕೆಟ್ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಶೇ.38 ರಷ್ಟು ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿಗೆ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಶೇ.18 ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಆದರೀಗ, ನಷ್ಟದಲ್ಲಿರುವ ನಿಗಮವನ್ನು ಮೇಲೆತ್ತಲು ಶೇ.38% ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದ್ದು, ಇನ್ನೆರೆಡು ದಿನಗಳಲ್ಲಿ ದರ ಪರಿಷ್ಕರಣೆ ಆಗಲಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.