ನನ್ನ ಜೀವ ಹೋದರೂ ಪರವಾಗಿಲ್ಲ; ಸರ್ಕಾರದ ನಿರ್ಲಜ್ಜ ನೀತಿ ವಿರುದ್ಧ ಅಹೋರಾತ್ರಿ ಧರಣಿ: ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು: ವಿದ್ಯಾಗಮ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ ಕೂರುವುದಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್…

hd kumaraswamy vijayaprabha

ಬೆಂಗಳೂರು: ವಿದ್ಯಾಗಮ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ ಕೂರುವುದಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?

ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರ ಸೋಮವಾರದೊಳಗೆ ವಿದ್ಯಾಗಮನ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ, ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

Vijayaprabha Mobile App free

ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೇಳಿದ್ದು, ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಹೇಳಿದ್ದಾರೆ.

ಮಕ್ಕಳಿಗೆ ಶಿಕ್ಷಣಕೊಡುವ ಸೋಗಿನಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ ಹಾಗೂ ಅಮಾನವೀಯ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ವರ್ಷ ಶಾಲೆ ಆರಂಭಿಸದಿದ್ದರೆ ದೇಶ ಮುಳುಗಿ ಹೋದೀತೆ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕೆ? ಇದೊಂದು ನಾಗರಿಕ ಸರ್ಕಾರವೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೋನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಸೋಂಕಿತರಿಗೆ ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜನಪ್ರತಿನಿಧಿ ಇರಲಿ, ಸಾಮಾನ್ಯ ಪ್ರಜೆಯೇ ಇರಲಿ, ಜೀವ ರಕ್ಷಣೆ ಮಾಡುವುದು ಸರ್ಕಾರದ ಮೊದಲ ಆದ್ಯತೆ ಮತ್ತು ಕರ್ತವ್ಯ, ಜೀವ ಉಳಿದರೆ ತಾನೇ ಬದುಕು? ಎಂದು ಕುಮಾರಸ್ವಾಮಿಯವರು ಪ್ರಶ್ನಿಸಿದ್ದಾರೆ.

ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.