ಜೀವ ವೈವಿಧ್ಯ ವನವನ್ನು ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮ ಖಂಡನೀಯ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಈ…

hd kumaraswamy vijayaprabha

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕಾರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ಜೀವ ವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು.

ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ.

Vijayaprabha Mobile App free

ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ.

ಗುಲ್ಬರ್ಗಾ ವಿ.ವಿ.ಗೆ 15 ಎಕರೆ, ಯೋಗ ವಿ.ವಿ.ಗೆ 15 ಎಕರೆ ಹಾಗು ಸಿ.ಬಿ.ಎಸ್.ಇ. ದಕ್ಷಿಣ ಭಾರತದ ಕಚೇರಿಗೆ ಎರಡು ಎಕರೆ ಸೇರಿ ಒಟ್ಟು 32 ಎಕರೆಯನ್ನು ನೀಡಿದ್ದು, ಇದರಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳವನ್ನು ನೀಡುವ ಮೂಲಕ ಜೀವ ವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕೆಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ ೨೦ ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿ.ವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ,ಪ್ರಾಣಿಶಾಸ್ತ್ರ,ಭೂಗರ್ಭಶಾಸ್ತ್ರ, ಪರಿಸರವಿಜ್ಞಾನ,ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ.

ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ .

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.