ಜನರ ಕಷ್ಟಗಳ ಅರಿವಿದೆ : ಕುಸುಮ ಹನುಮಂತರಾಯಪ್ಪ

ಬೆಂಗಳೂರು : ಆರ್ ಆರ್ ನಗರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ರವಿ ಅವರ ಪತ್ನಿ ಕುಸುಮ ಹನುಮಂತರಾಯಪ್ಪ ಅವರು ಕಾಂಗ್ರೆಸ್ ಪಕ್ಶದಿಂದ ನವಂಬರ್ 3 ರಂದು ನಡೆಯುವ ಉಪಚುನಾವಣೆಯಲ್ಲಿ ಸ್ಪರ್ದಿಸಲಿದ್ದು, ರಾಜಕೀಯ ಪ್ರವೇಶಕ್ಕೆ ಪ್ರೇರಣೆ…

kusuma hanumantharayappa vijayaprabha

ಬೆಂಗಳೂರು : ಆರ್ ಆರ್ ನಗರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ರವಿ ಅವರ ಪತ್ನಿ ಕುಸುಮ ಹನುಮಂತರಾಯಪ್ಪ ಅವರು ಕಾಂಗ್ರೆಸ್ ಪಕ್ಶದಿಂದ ನವಂಬರ್ 3 ರಂದು ನಡೆಯುವ ಉಪಚುನಾವಣೆಯಲ್ಲಿ ಸ್ಪರ್ದಿಸಲಿದ್ದು, ರಾಜಕೀಯ ಪ್ರವೇಶಕ್ಕೆ ಪ್ರೇರಣೆ ಯಾರು ಎಂಬುದರ ಬಗ್ಗೆ ಕುಸುಮ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಕುಸುಮ ಅವರು “ಜನರ ಕಷ್ಟಗಳ ಅರಿವಿದೆ..ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ನನ್ನ ತಂದೆಯವರ ಸಮಾಜ ಸೇವೆ, ಜನಾನುರಾಗಿ ರಾಜಕೀಯವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಹಾಗೆಯೇ, ಮದುವೆಯಾದ ನಂತರವೂ ರಾಜ್ಯದ ವಿವಿಧ ಪ್ರದೇಶಗಳಲ್ಲಿ ನನ್ನ ಪತಿ ಕೆಲಸ ಮಾಡಿದ ಸ್ಥಳಗಳಲ್ಲಿ ವಾಸ ಮಾಡಿದ್ದರಿಂದ ಜನರ ಸಮಸ್ಯೆಗಳ ಬಗ್ಗೆ ಅರಿವಾಗಿದೆ.

ನಂತರದ ಬೋಧಕ ವೃತ್ತಿ ನನ್ನೊಳಗಿನ ಸಮಾಜ ಸೇವೆಯ ಹಂಬಲವನ್ನು ಉದ್ದೀಪಿಸಿತು. ಈ ಎಲ್ಲ ಅನುಭವಗಳೇ ನನ್ನ ರಾಜಕೀಯ ಪ್ರವೇಶಕ್ಕೆ ಒಟ್ಟಾರೆ ಪ್ರೇರಣೆಯಾಗಿವೆ. ಇದನ್ನು ‘ವಾರ್ತಾಭಾರತಿ’ಯ ಸಂದರ್ಶನದಲ್ಲಿ ಹಂಚಿಕೊಂಡಿದ್ದೇನೆ ಎಂದು ಕುಸುಮ ಹನುಮಂತರಾಯಪ್ಪ ಅವರು ಸಂದರ್ಶನದ ವಿಡಿಯೋ ಅಪ್ ಲೋಡ್ ಮಾಡಿ ಟ್ವೀಟ್ ಮಾಡಿದ್ದಾರೆ.

Vijayaprabha Mobile App free

ಇದನ್ನು ಓದಿ: ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ..!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.