ಬೆಂಗಳೂರು : ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರುವ ಕಾರಣ ಆರ್.ಆರ್.ನಗರದ ಕೈ ಅಭ್ಯರ್ಥಿ ಕುಸುಮಾ ಅವರು ಹೇಳಿಕೆ ನೀಡಿದ್ದಾರೆ.
ಎಫ್ಐಆರ್ ಮೂಲಕ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಅಸಹಾಯಕ ಹೆಣ್ಣು ಮಗಳ ಮೇಲೆ ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂದು ಕುಸುಮ ಅವರು ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ನನಗಿಂತ ಮೊದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದವರಿದ್ದರು. ಅವರು ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನಿಸಿದ್ದು, ಕ್ಷೇತ್ರದ ಬಿಬಿಎಂಪಿ ಕಚೇರಿ ಆವರಣದಲ್ಲಿ ನಡೆದ ಆ ಘಟನೆ ಅತ್ಯಂತ ದೊಡ್ಡ ಶೋಷಣೆ ಎಂದು ನನಗೆ ಅನಿಸುತ್ತಿದೆ. ನಾನು ಜನರನ್ನು ನಂಬಿದ್ದು, ಅವರು ನನ್ನನ್ನು ಕೈಬಿಡುವುದಿಲ್ಲ ಎಂದು ಕುಸುಮ ಅವರು ಹೇಳಿದ್ದಾರೆ.
ಎರಡು ಕ್ಷೇತ್ರಗಳಿಗೆ ನವಂಬರ್ 3 ರಂದು ಉಪ ಚುನಾವಣೆ ಘೋಷಣೆಯಾಗಿದ್ದು, ಆರ್. ಆರ್. ನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕುಸುಮ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರ ಎದುರು ಸ್ಪರ್ದಿಸುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ.