ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ಜನರು ಕರೋನ ನಿಯಮ ಪಾಲಿಸದ ಹಿನ್ನಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸಭೆ ಕರೆದಿದ್ದು, ಈ ಸಭೆಯಲ್ಲಿ ನೈಟ್ ಕರ್ಪ್ಯೂ, ಲಾಕ್ ಡೌನ್ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಸಭೆಯಲ್ಲಿ ನೈಟ್ ಕರ್ಪ್ಯೂ, ಲಾಕ್ ಡೌನ್ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದು, ಲಾಕ್ ಡೌನ್ ಮಾಡಬಾರದು ಎಂದು ಸರ್ಕಾರ ಯೋಚಿಸುತ್ತಿದೆ. ಆದರೆ, ಕೊರೋನಾ ತಡೆಗೆ ಜನರು ಸರ್ಕಾರದ ನಿಯಮಾವಳಿಗಳನ್ನು ಪಾಲಿಸದೇ ಇದ್ದರೆ ಸರ್ಕಾರ ಏನು ಮಾಡಲು ಸಾಧ್ಯ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.