ರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣ

ಚಿತ್ರದುರ್ಗ : ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…

Road accident vijayaprabha

ಚಿತ್ರದುರ್ಗ : ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಾಲೇನಹಳ್ಳಿ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ನಡೆದಿದೆ.

ಕಾರು ಚಳ್ಳೆಕೆರೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿತ್ತು. ಲಾರಿ ಹಿರಿಯೂರು ಕಡೆಯಿಂದ ಬರುತ್ತಿತ್ತು. ಆದರೆ ಬಾಲೇನಹಳ್ಳಿ ಸಮೀಪದಲ್ಲಿ ಕಾರು ವೇಗವಾಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರು ಚಳ್ಳಿಕೆರೆ ತಾಲೂಕಿನ ಕರಿಕೆರೆ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗುದ್ದು, ಪ್ರಭಾಕರ್, ವೇಣು, ನಾಗವೇಣಿ ಮೃತ ದುರ್ದೈವಿಗಳಾಗಿದ್ದು, ವಿಶಾಲಾಕ್ಷಮ್ಮ ಎಂಬುವರು ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.