ಒಂದು ವೇಳೆ ನಿಮ್ಮ ಪಡಿತರ ಚೀಟಿ ಕಳೆದು ಹೋದರೆ ಆತಂಕ ಪಡುವ ಅಗತ್ಯವಿಲ್ಲ. ಮನೆಯಲ್ಲೇ ಕುಳಿತು ನೀವು ಆನ್‌ಲೈನ್‌ನಲ್ಲಿ ಪಡಿತರ ಚೀಟಿಯನ್ನು ಸುಲಭವಾಗಿ ಡೌನ್‌ಲೋಡ್ ಮಾಡಬಹುದು.
ಹೌದು, ಮೊದಲು ನೀವು nfsa.gov.in ಎಂಬ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ಮುಖಪುಟದಲ್ಲಿ ರೇಷನ್ ಕಾರ್ಡ್ ಆಯ್ಕೆಯನ್ನು ಕ್ಲಿಕ್ ಮಾಡಿ. ಅಲ್ಲಿ ರಾಜ್ಯ ಪೋರ್ಟಲ್‌ನಲ್ಲಿ ಪಡಿತರ ಚೀಟಿ ವಿವರಗಳು ಕಾಣಿಸುತ್ತವೆ. ಅದರ ಮೇಲೆ ಕ್ಲಿಕ್ ಮಾಡಿ.
ಬಳಿಕ ಪಡಿತರ ಚೀಟಿ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಹೆಸರು, ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಸಂಖ್ಯೆ, ಹುಟ್ಟಿದ ದಿನಾಂಕ, ನೋಂದಾಯಿತ ಮೊಬೈಲ್ ಸಂಖ್ಯೆ ಇತ್ಯಾದಿಗಳನ್ನು ನಮೂದಿಸಿ, ನಂತರ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
ಅದನ್ನು ನಮೂದಿಸಿದ ನಂತರ, ಇ-ರೇಷನ್ ಕಾರ್ಡ್ PDF ರೂಪದಲ್ಲಿ ಡೌನ್‌ಲೋಡ್ ಆಗುತ್ತದೆ. ಆದರೆ, ನಿಮ್ಮ ಪಡಿತರ ಚೀಟಿಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದಾಗ ಮಾತ್ರ ಆಧಾರ್ ಕಾರ್ಡ್ ಸಂಖ್ಯೆಯನ್ನು ಡೌನ್‌ಲೋಡ್ ಮಾಡಬಹುದು. ಆಧಾರ್ ಲಿಂಕ್ ಇಲ್ಲದೆ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ.