ಹುಬ್ಬಳ್ಳಿ: ಜೆಡಿಎಸ್ ಮುಖಂಡ ಹಾಗು ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಹೌದು, ಹುಬ್ಬಳಿಯ ಗೋಕುಲ ಗಾರ್ಡನ್‌ನಲ್ಲಿ ಇಂದು ಬೆಳಿಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲಿದ್ದು, ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.
ಇನ್ನು, ಮಧು ಬಂಗಾರಪ್ಪ ಅವರ ಸಹೋದರ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಪಕ್ಷದಲ್ಲಿದ್ದು, ಶಾಸಕರಾಗಿ ಗೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




