ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಇದೀಗ ಕೊರೋನಾ ಸೋಂಕಿನಿಂದ 1ಲಕ್ಷಕ್ಕಿಂತ ಹೆಚ್ಚು ಸಾವು ಕಂಡ ರಾಜ್ಯ ಎಂಬ ಬೇಡದ ದಾಖಲೆಯ ಸಮೀಪದಲ್ಲಿದೆ.
ಹೌದು, ವಿಶ್ವದ 7 ದೇಶಗಳಲ್ಲಿ ಲಕ್ಷಕ್ಕಿಂತ ಹೆಚ್ಚಿನ ಕೋವಿಡ್ ಸಾವುಗಳಾಗಿದ್ದು, ಆದರೆ ದೇಶದ ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಸಾವು ಸಂಭವಿಸುವ ಸಾಧ್ಯತೆ ಇದೆ.
ನಿನ್ನೆಯವರೆಗೆ ಮಾಹಿತಿ ಪ್ರಕಾರ ಮಹಾರಾಷ್ಟ್ರದಲ್ಲಿ ಕರೋನ ಸೋಂಕಿಗೆ ತುತ್ತಾಗಿ 99,512 ಮಂದಿ ಸಾವನ್ನಪ್ಪಿದ್ದಾರೆ, ನಿನ್ನೆ ಒಂದೇ ದಿನ 300ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಬಹುತೇಕ ಇನ್ನೂ ಒಂದೆರಡು ದಿನಗಳಲ್ಲಿ ಸೋಂಕಿತರ ಸಾವಿನ ಸಂಖ್ಯೆ ಲಕ್ಷ ಗಡಿ ದಾಟುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.