ಮಂಡ್ಯ: ಕಬಡ್ಡಿ ಆಡುವಾಗಲೇ ಆಟಗಾರನೋರ್ವ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ಧಾರುಣ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರೀತಮ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಮೂಲದವನಾಗಿದ್ದ ಪ್ರೀತಮ್ ಶೆಟ್ಟಿ ಹನುಮ ಜಯಂತಿ ಹಿನ್ನೆಲೆ ನಾಗಮಂಗಲದಲ್ಲಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯದಲ್ಲಿ ಭಾಗಿಯಾಗಿದ್ದರು. ಆಟದಲ್ಲಿ ಭಾಗಿಯಾಗಿದ್ದಾಗಲೇ ಅವನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.
ನೋವಿನಿಂದ ಎದೆ ಹಿಡಿದುಕೊಂಡು ಕುಸಿದುಬಿದ್ದು ಅಸ್ವಸ್ಥಗೊಂಡ ಪ್ರೀತಮ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ತೀವ್ರ ಅಸ್ವಸ್ಥಗೊಂಡಿದ್ದ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.