Kannada Sahitya Sammelana : ಮಂಡ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮದ ಸಮಗ್ರ ಜಾರಿ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ, ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ: Kannada Sahitya Sammelana | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಿದ್ಧ; ಫ್ರೀ ಬಸ್ ವ್ಯವಸ್ಥೆ
ಮಂಡ್ಯದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ 6 ನಿರ್ಣಯಗಳು ಯಾವುವು?
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದೆ. ಸಮ್ಮೇಳನದಲ್ಲಿ 6 ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
- ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ-2022 ಸಮಗ್ರ ಜಾರಿಗೆಗೆ ಒತ್ತಾಯ
- ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ , ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ
- ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಬೇಕು. ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್ಗಳನ್ನು ಸರ್ಕಾರ ಎದುರಿಸಬೇಕು.
- ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
- ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಬೇಕು.
- 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಎಲ್ಲರಿಗೂ, ಗಣ್ಯರಿಗೆ ಅಭಿನಂದನೆಗೆ ಮಂಡನೆ.
ಇದನ್ನೂ ಓದಿ: Udyogini yojana | ಉದ್ಯೋಗಿನಿ ಯೋಜನೆಯಿಂದ 3 ಲಕ್ಷ ಉಚಿತ ಲೋನ್ ಹೇಗೆ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ