ಮಂಗಳೂರು: ನಗರದಲ್ಲಿ ರಸ್ತೆ ಬದಿ ಕಸ ಎಸೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ 20 ಸಾವಿರ ರೂ.ದಂಡ ವಿಧಿಸಿದ್ದು, ನಗರದ ಕಂಕನಾಡಿ ಬಳಿಯ ರಸ್ತೆಯಲ್ಲಿ ಕಸ ಎಸೆದ ಫಾಸ್ಟ್ ಫುಡ್ ನೌಕರನಿಗೆ ದಂಡ ವಿಧಿಸಲಾಗಿದೆ.
ಹೌದು, ಈ ಜಾಗದಲ್ಲಿ ಕಸ ಎಸೆದ ಪರಿಣಾಮ ಬ್ಲ್ಯಾಕ್ ಸ್ಪಾಟ್ ನಿರ್ಮಾಣಗೊಂಡಿತ್ತು. ಆದರೆ, ಮಂಗಳೂರು ಮಹಾನಗರ ಪಾಲಿಕೆಯು ಬಳಿಕ ಆ ಪ್ರದೇಶವನ್ನು ಸಂದರಗೊಳಿಸಿತ್ತು. ಅದರ ನಂತರ ಕೂಡ ಕಸ ಎಸೆಯುವುದು ನಿಯಂತ್ರಣಕ್ಕೆ ಬಂದಿದ್ದರೂ ಇತ್ತೀಚೆಗೆ ಕೆಲವರು ಕಸ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಕಸ ಎಸೆಯುತ್ತಿದ್ದ ಫಾಸ್ಟ್ ಫುಡ್ ನೌಕರನಿಗೆ 20 ಸಾವಿರ ರೂ. ದಂಡ ವಿಧಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.