ಮಂಗಳೂರು: ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಡಬ ತಾಲ್ಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ಅವಘಡ ಸಂಭವಿಸಿದ್ದು, ಸೀತಾರಾಮ ಸಾವನ್ನಪ್ಪಿದ ಬೈಕ್ ಸವಾರನಾಗಿದ್ದಾನೆ.
ಸೀತಾರಾಮ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕೆಲಸ ಮುಗಿಸಿ ಕಡಬದಿಂದ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ. ಈ ವೇಳೆ ಏಕಾಏಕಿ ಮರ ಮುರಿದುಬಿದಿದ್ದು, ಮೈಮೇಲೇ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ನಗರದಲ್ಲಿ ಹಲವೆಡೆ ಅಪಾಯಕಾರಿ ರೀತಿಯಲ್ಲಿ ಮರಗಳಿದ್ದು, ಕೆಲವೊಂದು ಮುರಿದು ಬೀಳುವ ಹಂತದಲ್ಲಿವೆ. ಹೀಗಾಗಿ ಸಾಕಷ್ಟು ಬಾರಿ ಸಾರ್ವಜನಿಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಸಹ ಅರಣ್ಯ ಇಲಾಖೆಯ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.