ಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ಪತಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರ ವಲಯದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ. ಕಾರ್ತಿಕ್ ಭಟ್(37) ಆತ್ಮಹತ್ಯೆ ಮಾಡಿಕೊಂಡ ಪತಿಯಾಗಿದ್ದು, ಪ್ರಿಯಾಂಕಾ(28) ಹಾಗೂ ಮಗು ಹೃದಯ್(4) ಕೊಲೆಯಾದ ದುರ್ದೈವಿಗಳಾಗಿದ್ದಾರೆ.
ಕಾರ್ತಿಕ್ ಭಟ್ ಪತ್ನಿ ಹಾಗೂ ಮಗುವನ್ನು ಕೊಂದು ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ರೈಲ್ವೇ ಹಾಗೂ ಮುಲ್ಕಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ತಿಕ್ ಭಟ್ ಮೃತದೇಹವನ್ನು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಪತ್ನಿ, ಮಗುವಿನ ಹತ್ಯೆ ಹಾಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಕೈಗೊಂಡಿದ್ದಾರೆ.