ರೆಸಾರ್ಟ್ Swimming Pool ನಲ್ಲಿ ಮುಳುಗಿ ಮೂವರು ಯುವತಿಯರ ಸಾವು!

ಮಂಗಳೂರು: ಈಜುಕೊಳದಲ್ಲಿ ಈಜಲು ತೆರಳಿದ್ದ ವೇಳೆ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್‌ ನಿವಾಸಿ ನಿಶಿತ ಎಂ.ಡಿ(21),…

ಮಂಗಳೂರು: ಈಜುಕೊಳದಲ್ಲಿ ಈಜಲು ತೆರಳಿದ್ದ ವೇಳೆ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್‌ ನಿವಾಸಿ ನಿಶಿತ ಎಂ.ಡಿ(21), ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್(20), ವಿಜಯ ನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನ ಎನ್(21) ಮೃತ ದುರ್ದೈವಿಗಳಾಗಿದ್ದಾರೆ.

ಮೈಸೂರು ಮೂಲದ ಯುವತಿಯರು ಶನಿವಾರ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು. ಬಳಿಕ ಭಾನುವಾರ ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ನಲ್ಲಿ ಆಟವಾಡುತ್ತಿದ್ದ ವೇಳೆ ಈಜಲಾಗದೇ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಸ್ವಿಮ್ಮಿಂಗ್ ಫೂಲ್‌ನ ಒಂದು ಬದಿ ಡೈವಿಂಗ್ ಮಾಡಲು 6 ಅಡಿಯಷ್ಟು ಆಳವಿದ್ದು, ಈಜುತ್ತಿದ್ದ ಯುವತಿಯರ ಪೈಕಿ ಓರ್ವ ಯುವತಿ ಆಳಕ್ಕೆ ಮುಳುಗಿರುವ ಸಾಧ್ಯತೆಯಿದೆ‌. ಈ ವೇಳೆ ಆಕೆಯ ರಕ್ಷಣೆಗೆ ತೆರಳಿದ ಇನ್ನಿಬ್ಬರೂ ಸಹ ಮೇಲೆ ಬರಲಾಗದೇ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.