ಮರಾಠ ಅಭಿವೃದ್ಧಿ ನಿಗಮ ರಚನೆಗೆ ಅಪಸ್ವರ ಬೇಡ; ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಮನವಿ

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ರಚನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ಕೇಳಿ ಬಂದಿದ್ದು, ಡಿ.5ರಂದು ರಾಜ್ಯ ಬಂದ್ ಮಾಡಲು ವಿವಿಧ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಆದರೆ ಮರಾಠ ಅಭಿವೃದ್ಧಿ ಪ್ರಾಧೀಕಾರ…

yashavantha rao jadhav bjp davanagere

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ರಚನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ಕೇಳಿ ಬಂದಿದ್ದು, ಡಿ.5ರಂದು ರಾಜ್ಯ ಬಂದ್ ಮಾಡಲು ವಿವಿಧ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಆದರೆ ಮರಾಠ ಅಭಿವೃದ್ಧಿ ಪ್ರಾಧೀಕಾರ ರಚನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಮನವಿ ಮಾಡಿದ್ದಾರೆ.

ಮರಾಠಿ ಭಾಷೆ ಅಭಿವೃದ್ಧಿಗೆ ನಿಗಮ ರಚಿಸಲು ಸರ್ಕಾರ ಮುಂದಾಗಿಲ್ಲ ಬದಲಿಗೆ ರಾಜ್ಯದಲ್ಲಿರುವ ಮರಾಠಿ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪಿಸಲು ಮುಂದಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಮರಾಠಿ ಸಮುದಾಯದವರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಅವರ ಪ್ರಗತಿಯ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ನಿರ್ಧಾರ ತೆಗೆದುಕೊಂಡಿದ್ಧಾರೆ.

Vijayaprabha Mobile App free

500 ವರ್ಷಗಳ ಹಿಂದೆಯೇ ನಮ್ಮ ಪೂರ್ವಜರು ಈ ನಾಡಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಆಳ್ವಿಕೆ ಮಾಡಿದ್ದಾರೆ. ಮಹಾರಾಷ್ಟ್ರದ ಗಡಿಯಲ್ಲಿ ಎಂಇಎಸ್ ಪುಂಡಾಟಿಕೆ ನಡೆಸಿದಾಗ ನಮ್ಮ ಸುಮುದಾಯ ಅದನ್ನು ಖಂಡಿಸಿದೆ. ನಿಗಮ ರಚನೆ ಮಾಡಲು ಮುಂದಾಗಿರುವ ಸರ್ಕಾರ ನಿರ್ಧಾರ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು. ಎಂದು ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸೋಮಶೇಖರ್ ಪವಾರ್, ಪರಶುರಾಮ್ ಸಾಳುಂಕೆ, ಗೋಪಾಲರಾವ್ ಮಾನೆ, ಮಂಜುನಾಥ ರಾವ್ ಕಾಠೆ ಇದ್ದರು.

 

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.