Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ…

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. 

ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಅಲ್ಲಿಯೂ ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Vijayaprabha Mobile App free

ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.