ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಬಾಣಂತಿಯೋರ್ವಳು ಸಾವನ್ನಪ್ಪಿದ್ದಾರೆ. ಬಾಣಂತಿಯನ್ನು ಬೆಳಗಾವಿ ತಾಲ್ಲೂಕಿನ ನೀಲಜಿ ಗ್ರಾಮದ ಅಂಜಲಿ ನಿಂಗಣಿ ಪಾಟೀಲ್ (32) ಎಂದು ಗುರುತಿಸಲಾಗಿದೆ.
ಮಹಿಳೆಯನ್ನು ಜನವರಿ 27 ರಂದು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಈ ಹಿಂದೆ ಹೆರಿಗೆಯ ದಿನಾಂಕವನ್ನು ಜನವರಿ 22 ಎಂದು ನೀಡಿದ್ದರು. ಆದರೆ ಹೆರಿಗೆ ನೋವು ಇರಲಿಲ್ಲವಾದ್ದರಿಂದ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು ಮತ್ತು ಆಕೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿದ್ದರು. ಆದರೆ ತಡರಾತ್ರಿ ಆಕೆ ಸಾವನ್ನಪ್ಪಿದ್ದಾಳೆ.
ಆಕೆಯ ಸಾವಿಗೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.