ಬೀದರ್: ಏಳು ಅಂತಸ್ತಿನ ಕಟ್ಟಡದಿಂದ ಬಿದ್ದು MBBS ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ನಲ್ಲಿ ನಡೆದಿದೆ.
ಹೌದು, ಆಸ್ಪತ್ರೆ ಆವರಣದ ಏಳು ಅಂತಸ್ತಿನ ಹಾಸ್ಟೆಲ್ ಟೆರಸ್ ಮೇಲಿಂದ ಶ್ರೀರಾಮ ಕಾಡಗಿ (22) ಎಂಬಾತ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದು, MBBSನಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಶ್ರೀರಾಮ ಟಾಪರ್ ಕೂಡ ಆಗಿದ್ದ.
ಕೆಲವು ದಿನಗಳಿಂದ ವಿದ್ಯಾರ್ಥಿ ಶ್ರೀರಾಮ ಕಾಡಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದ್ದು, ಈ ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.