ಬೆಂಗಳೂರು:-ಸರ್ಕಾರದ ಜಾಹೀರಾತು ಸಂಸ್ಥೆಯಾದ ಮೆ: ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಎಂಸಿಎ) ಕಂಪನಿಯು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಫೆಬ್ರುವರಿ 18 ಗುರುವಾರ 1 ಕೋಟಿ ರೂಪಾಯಿಗಳ ದೇಣಿಗೆ ನೀಡದೆ.
2019-20 ನೇ ಸಾಲಿನ ಕಂಪನಿ ಲಾಭಾಂಶದಿಂದ ಮೆ: ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪನಿ ಅಧ್ಯಕ್ಷರಾದ ಸಿ.ಮುನಿಕೃಷ್ಣ ರವರು ಮುಖ್ಯಮಂತ್ರಿಯವರ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ಚೆಕ್ ನೀಡಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರಾದ ಜಗದೀಶ ಶೆಟ್ಟರ್ ಅವರು ಈ ಚೆಕ್ ಅನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಂಪನಿಂರು ನಿರ್ದೇಶಕರಾದ ಹೆಚ್.ಆರ್. ತೀರ್ಥಲಿಂಗಪ್ಪ ಹಾಗೂ ವೀರೇಶ್ ಸಂಗಳ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಬಿ. ಪೂಜಾರಿ ಹಾಗು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವಗುಪ್ತ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕರೋನ ಸೋಂಕಿನಿಂದ ದೇಶದ ಎಲ್ಲಾ ವ್ಯವಹಾರಗಳೂ ತಟಸ್ಥವಾಗಿದ್ದು, ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತವಾಗಿದ್ದು ಎಲ್ಲರಿಗೂ ತಿಳಿದ ವಿಷಯ. ಆದರೂ, ಇಂತಹ ಸಂದರ್ಭದಲ್ಲಿಯೂ ಕೂಡ ಮೆ: ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪನಿಯು ತನ್ನ ಪರಿಶ್ರಮ ಮತ್ತು ಸಮರ್ಪಿತ ಸೇವೆಯಿಂದ ಲಾಭ ಗಳಿಕೆಯ ಪಥದಲ್ಲಿ ಮುನ್ನಡೆಯುತ್ತಿದೆ. ಅಷ್ಟೇ ಅಲ್ಲದೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯ ಬಗ್ಗೆ ಈ ಕಂಪನಿಯು ಹೊಂದಿರುವ ಕಾಳಜಿಯನ್ನು ಸಹ ತೋರಿಸುತ್ತದೆ.