ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ (ಮಾರ್ಚ್ 30) ಏಪ್ರಿಲ್ 4 ರವರೆಗೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಾಮರಾಜನಗರ & ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇದನ್ನು ಓದಿ: ಏಪ್ರಿಲ್ 1 ರಿಂದ ಇವುಗಳ ಬೆಲೆ ಭಾರೀ ಹೆಚ್ಚಳ: ಯಾವುದು ದುಬಾರಿ? ಯಾವುದು ಅಗ್ಗ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಭಾರೀ ಮಳೆ
ಇನ್ನು, ಬೆಂಗಳೂರಿನಲ್ಲಿ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೆಲಮಂಗಳ ಸುತ್ತಮುತ್ತ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಲ್ಲದೇ. ಗುಡುಗು ಸಹಿತ ಭಾರೀ ಮಳೆಗೆ ಕತ್ತಲು ಆವರಿಸಿದಂತಾಗಿತ್ತು. ಚಾಮರಾಜನಗರ ಜಿಲ್ಲೆಯಲ್ಲಿ ಸಹ ನಿನ್ನೆ ಸಂಜೆ ಸಾಧಾರಣ ಮಳೆಯಾಗಿದ್ದು, ಧರೆ ತಂಪಾಗಿದ್ದಕ್ಕೆ ಜನ ಸಂತಸಗೊಂಡಿದ್ದಾರೆ.
ಇದನ್ನು ಓದಿ: ಹೀಟ್‌ಸ್ಟ್ರೋಕ್ ಕಾಯಿಲೆ ಲಕ್ಷಣಗಳೇನು, ಇದರಿಂದ ರಕ್ಷಣೆ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ನೋಡಿ
ಕಳೆದ ವಾರ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆಯಿತ್ತು.. ನಿನ್ನೆ ಸಹ ಬೆಂಗಳೂರು ಸುತ್ತಮುತ್ತ ಮಳೆಯಾಗಿದ್ದು, ಇಂದು ಸಹ ಮಳೆಯಾಗಲಿದೆ. ಅಲ್ಲದೆ ಮಧ್ಯಾಹ್ನದ ವೇಳೆ ಬಿಸಿಲು ಸಹ ಏರಿಕೆಯಾಗಲಿದ್ದು, ಉರಿಯು ಹೆಚ್ಚಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನು ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ