ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು.
ನಾಲ್ಕು ಕ್ಷೇತ್ರಕ್ಕೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಶಹಾಪುರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಹುಕ್ಕೇರಿ ಸೇರಿದಂತೆ ಕೆಲವು ಘಟಾನುಘಟಿಗಳು ಕಣದಲ್ಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.