Big News: `ಸಿಸೇರಿಯನ್‌ ಹೆರಿಗೆ’ ನಿಯಂತ್ರಣಕ್ಕೆ ವಿಶೇಷ ಕಾರ್ಯಕ್ರಮ: ದಿನೇಶ್ ಗುಂಡೂರಾವ್ 

ಬೆಂಗಳೂರು: ರಾಜ್ಯದಲ್ಲಿ `ಸಿಸೇರಿಯನ್‌ ಹೆರಿಗೆ’ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ…

ಬೆಂಗಳೂರು: ರಾಜ್ಯದಲ್ಲಿ `ಸಿಸೇರಿಯನ್‌ ಹೆರಿಗೆ’ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ 46% ಇದೆ. 

ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್‌ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ತಿಂಗಳು ನೂತನ ಕಾರ್ಯಕ್ರಮವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply