ಹುಬ್ಬಳ್ಳಿ : ಕಾಂಗ್ರೆಸ್ ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ತ್ವ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ನವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ ಇದೆ. ಕಾಂಗ್ರೆಸ್ ನವರಿಗೆ ಪ್ರಜಾಪ್ರಭುತ್ತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಮೋದಿ, ಸಿಎಂ ಯಡಿಯೂರಪ್ಪ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಇಂತಹ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
ಇನ್ನು ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಹುಲ್ ಹೇಳಿಕೆಗಳ ಬಗ್ಗೆ ಅವರ ಪಾರ್ಟಿಯಲ್ಲೇ ನಗುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿಕೆ ನೀಡಿದ್ದಾರೆ.
ಇದನ್ನು ಓದಿ: ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ ಎಲೆಕ್ಟ್ರಾನಿಕ್ಸ್ ಮತ್ತು ಸರಕುಗಳ ಕ್ಲಸ್ಟರ್; 20 ಸಾವಿರ ಉದ್ಯೋಗ ಸೃಷ್ಟಿ: ಬಿ ಎಸ್ ಯಡಿಯೂರಪ್ಪ