ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಸಚಿವ ಆರ್.ಅಶೋಕ್ ಅವರು, ಸಭಾಪತಿ ಚುನಾವಣೆ ಸಂಬಂಧ ಮತ್ತು ಗೋಹತ್ಯೆ ನಿಷೇಧ ಕಾಯಿದೆ ಜಾರಿ ಸಂಬಂಧ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಸಿರುವ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರೇ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಇವರೇ ಆಯ್ಕೆಯಾಗುತ್ತಾರೆ ಎಂಬುದೂ ಕೂಡ ಖಚಿತವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.