ಗದಗ : ಸಿದ್ದರಾಮಯ್ಯ ಅವರು ಪಕ್ಷದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದು, ಅವರ ಸಮಾಜದಲ್ಲೇ ಅವರಿಗೆ ಬೆಲೆ ಇಲ್ಲದಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.
ಗದಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ ಶ್ರೀರಾಮುಲು ಅವರು. ಕುರುಬ ಸಮುದಾಯವನ್ನು ಎಸ್ಟಿಗೆ, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಹೋರಾಟ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಿಂದ 26 ಜಿಲ್ಲೆಯಲ್ಲಿ ಸರ್ವೇ ನಡೆಯುತ್ತಿದ್ದು, ವರದಿ ಬಂದ ಕೂಡಲೇ ಸಿಎಂ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ. ಅವರು ಸಿಎಂ ಆಗಿದ್ದಾಗ ಯಾವುದೇ ಪ್ರಾಕೃತಿಕ ವಿಕೋಪ ಸಂಭವಿಸಲಿಲ್ಲ. ಆದರೆ ನೆರೆ, ಕೊರೋನಾದಂತಹ ಸಮಯದಲ್ಲೂ ಸಿಎಂ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಎಲ್ಲ ಕ್ಷೇತ್ರಕ್ಕೆ ಅನುದಾನ ನೀಡಿದ್ದಾರೆ. ಸಿದ್ದರಾಮಯ್ಯರಿಗೆ ಸಿಎಂ ಖುರ್ಚಿ ಕಾಣುತ್ತಿದೆಯೇ ಹೊರತು, ಅಭಿವೃದ್ಧಿ ಕಾಣುತ್ತಿಲ್ಲ.
ನಮ್ಮ ಸರ್ಕಾರವು ಎಲ್ಲ ಕ್ಷೇತ್ರಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಿದೆ. ಹಾಗಾಗಿಯೇ ಇಂದು ಸಿದ್ದರಾಮಯ್ಯ ಅವರ ಕ್ಷೇತ್ರವಾದ ಬಾದಾಮಿಯಲ್ಲಿ ನಾನು ಮತ್ತು ಅವರು ಅಂಬೇಡ್ಕರ್ ವಸತಿ ಶಾಲೆಗೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದಕ್ಕೆ 19.5 ಕೋಟಿ ರೂ. ವ್ಯಯಿಸಲಾಗುತ್ತದೆ.
ಇತ್ತೀಚೆಗೆ ಸಿದ್ದರಾಮಯ್ಯ ಅವರು ಪಕ್ಷದಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದಾರೆ. ಅವರ ಸಮಾಜದಲ್ಲೇ ಅವರಿಗೆ ಬೆಲೆ ಇಲ್ಲದಂತಾಗಿದೆ. ಹಾಗಾಗಿ ‘ಹಿಂದ’ ಅಂತೆಲ್ಲ ಮಾತಾಡಿಕೊಂಡು ತಿರುಗಾಡುತ್ತಿದ್ದಾರೆ.
ನಮ್ಮ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಎಂದಿಗೂ ಅಭಿವೃದ್ಧಿಯ ಪರವಾಗಿದ್ದು, ಇದಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದಿದ್ದೇ ಸಾಕ್ಷಿಯಾಗಿದೆ. ಮುಂಬರುವ ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣೆಯಲ್ಲೂ ಅಭೂತಪೂರ್ವ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದ್ದಾರೆ.
ಗದಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಕುರುಬ ಸಮುದಾಯವನ್ನು ಎಸ್ಟಿಗೆ, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಹೋರಾಟ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಿಂದ 26 ಜಿಲ್ಲೆಯಲ್ಲಿ ಸರ್ವೇ ನಡೆಯುತ್ತಿದ್ದು, ವರದಿ ಬಂದ ಕೂಡಲೇ ಸಿಎಂ ಶ್ರೀ @BSYBJP ಅವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. pic.twitter.com/6IyIrUKSwq
— B Sriramulu (@sriramulubjp) February 12, 2021