ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾತ್ರಿ ಸುಮಾರು 10:30ರ ಸುಮಾರಿಗೆ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ.
ಉಮೇಶ್ ಕತ್ತಿ ನಿಧನ: ಗಣ್ಯರ ಸಂತಾಪ
ಇನ್ನು, ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ. ಸಚಿವ ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಇನ್ನು, ಸುದ್ದಿ ಕೇಳಿ ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಧಾವಿಸಿದ್ದ ಸಿಎಂ ಬೊಮ್ಮಾಯಿ, ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಸುಧಾಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.