ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ನೌಕರರನ್ನು ರಾಜ್ಯ ಸರ್ಕಾರ ಶಿಕ್ಷಿಸಲು ಮುಂದಾಗಿದೆಯೇ ಎಂಬ ಅನುಮಾನ ಮೂಡಿಸಿದೆ.
ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ಈಚೆಗೆ ಪ್ರತಿಭಟನೆ ನಡೆಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತು. ಈಗ ಮುಷ್ಕರದ ಬಿಸಿ ಆರುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾದ ನೌಕರರನ್ನು ಏಕಾಏಕಿ ಅಮಾನತು ಗೊಳಿಸಲಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿಭಟನೆಯಿಂದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಪ್ರತಿಭಟನೆಯಿಂದ ತುಂಬಾ ನಷ್ಟ ಉಂಟಾಗಿದೆ ಎಂದು ಕಾರಣ ಹೇಳಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. 200ಕ್ಕೂ ಹೆಚ್ಚು ನೌಕರರನ್ನು ಅಮಾನತು ಮಾಡಿದ್ದು, ಆಡಳಿತ ವರ್ಗದ ಕ್ರಮಕ್ಕೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೆ ಹೋರಾಟ ನಡೆಸುವ ಎಚ್ಚರಿಕೆ
ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದರೆ ಅಮಾನತು ಮಾಡಲಾಗುತ್ತಿದೆ. ಸರ್ಕಾ್ರದ ಈ ಕ್ರಮ ಖಂಡನೀಯ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರ ನಿರ್ಧಾರ ಸರಿಯಲ್ಲ. ಒಂದು ವೇಳೆ ಸಾರಿಗೆ ಸಚಿವರ ಗಮನಕ್ಕೆ ತರದೆ ನಿರ್ಧಾರ ಕೈಗೊಂಡಿರಬಹುದು. ಆದ್ದರಿಂದ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಮತ್ತೆ ಮುಷ್ಕರ ನಡೆಸಲಾಗುವುದು ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ.