ಹೊಸದಿಲ್ಲಿ: ಪಶ್ಚಿಮ ದೆಹಲಿಯ ಮನೋಹರ್ ಪಾರ್ಕ್ನಲ್ಲಿರುವ ತಮ್ಮ ಮನೆಯಲ್ಲಿ ಎಲ್ಪಿಜಿ ಸಿಲಿಂಡರ್ನಿಂದ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಇಬ್ಬರು ಅಪ್ರಾಪ್ತ ಒಡಹುಟ್ಟಿದವರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಸೋಮವಾರ ತಿಳಿಸಿದೆ.
ಭಾನುವಾರ ರಾತ್ರಿ 8:20ರ ಸುಮಾರಿಗೆ ಮನೋಹರ್ ಪಾರ್ಕ್ನ WZ-7 ನಲ್ಲಿ ಈ ಘಟನೆ ನಡೆದಿದೆ. ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸ್ಥಳಕ್ಕೆ ಭೇಟಿ ನೀಡಿದ ತಂಡವು ಎಲ್ಪಿಜಿ ಸಿಲಿಂಡರ್ನಿಂದ ಬೆಂಕಿ ಕಾಣಿಸಿಕೊಂಡಿರುವುದನ್ನು ದೃಢಪಡಿಸಿದೆ ಎಂದು ಡಿಎಫ್ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಪಿಸಿಆರ್ ತಂಡವು ಆಚಾರ್ಯ ಭಿಕ್ಷು ಆಸ್ಪತ್ರೆಗೆ ಕರೆದೊಯ್ದಿದೆ. ಘಟನೆಯಲ್ಲಿ ಸಾಕ್ಷಿ (12) ಮತ್ತು ಆಕೆಯ ಸಹೋದರ ಆಕಾಶ್ (9) ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಸಂದೀಪ್ ಪಾಠಕ್ ಶೇಕಡಾ 5 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪಂಜಾಬಿ ಬಾಗ್ ಪೊಲೀಸ್ ಠಾಣೆಯ ತಂಡ ತನಿಖೆಗಾಗಿ ಸ್ಥಳಕ್ಕೆ ತಲುಪಿದೆ.