ರಾಜಕೀಯ ಅಖಾಡಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್ ಎಂಟ್ರಿ ಕೊಟ್ಟಿದ್ದು, ಅತ್ತೆ ಹೆಬ್ಬಾಳ್ಕರ್ ಕುಕ್ಕರ್ ಕೊಟ್ಟು ಸುದ್ದಿಯಾಗಿದ್ದರೆ, ಅಳಿಯ ರಜತ್ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ, ಶರ್ಟ್ ಕೊಟ್ಟು ಸುದ್ದಿಯಾಗಿದ್ದಾರೆ.
ಹೌದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಜತ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ತೊಡೆ ತಟ್ಟಲು ಅಣಿಯಾಗಿದ್ದಾರೆ. ಹಾಗಾಗಿ, ಚುನಾವಣೆ ಘೋಷಣೆಗೊ ಮುನ್ನವೇ ಮತದಾರರನ್ನು ಸೆಳೆಯಲು ಕಸರತ್ತು ಆರಂಭಿಸಿದ್ದು, ಹು-ಧಾ ಸೆಂಟ್ರಲ್ ಕ್ಷೇತ್ರದ ಜನರಿಗೆ ಕುಕ್ಕರ್ ಸೇರಿದಂತೆ ವಿವಿಧ ವಸ್ತುಗಳನ್ನು ಹಂಚಿಕೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.