ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನದ ಭೀತಿ ಎದುರಾಗಿದ್ದು, ಮಾಡಾಳ್ ಪುತ್ರ ಪ್ರಶಾಂತ್ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಗದು ಸಿಕ್ಕಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರ ಬಂಧನಕ್ಕೆ ಬಲೆ ಬೀಸಿದ್ದು, 3 ದಿನಗಳು ಕಳೆದರು ಅವರ ಸುಳಿವು ಲಭ್ಯವಾಗಿರಲಿಲ್ಲ.
ಇದನ್ನು ಓದಿ: ಬಿಜೆಪಿ ಶಾಸಕನ ಪತ್ತೆಗಾಗಿ ಲೋಕಾಯುಕ್ತ ಬಲೆ; ಮಾಡಾಳ್ ವಿರೂಪಾಕ್ಷಪ್ಪ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ..!
ಈ ನಡುವೆ ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಲೋಕಾಯುಕ್ತ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ನಿರ್ಧರಿಸಿದ್ದರು ಎನ್ನಲಾಗಿತ್ತು.
ಆದರೆ , ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈಗ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿರುವ ಶಾಸಕರು ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ಈ ಬಗ್ಗೆ ಹೈಕೋರ್ಟ್ ಏಕ ಸದಸ್ಯ ಪೀಠ ನಾಳೆಗೆ ವಿಚಾರಣೆ ನಿಗದಿ ಮಾಡಿದೆ.
ಇದನ್ನು ಓದಿ: ದಾವಣಗೆರೆ: 3 ದಿನದಿಂದ ಮೊಬೈಲ್ ಸ್ವಿಚ್ ಆಫ್..ಎಲ್ಲಿದ್ದಾರೆ ಶಾಸಕ ವಿರೂಪಾಕ್ಷಪ್ಪ..!!