ಹೊಸಪೇಟೆ: ವಿಜಯನಗರ ನೂತನ ಜಿಲ್ಲೆ ಬಗ್ಗೆ ಪರ ವಿರೋಧದ ಚರ್ಚೆ ಹಿನ್ನಲೆ ಒಬ್ಬರ ಸ್ವಾರ್ಥಕ್ಕಾಗಿ ಜಿಲ್ಲೆಯನ್ನು ಇಬ್ಬಾಗ ಮಾಡಿದ್ದಾರೆ ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಶಾಸಕ ಬಿ ನಾಗೇಂದ್ರ ಹೇಳಿಕೆ ನೀಡಿದ್ದಾರೆ.
ಶಾಸಕ ಬಿ ನಾಗೇಂದ್ರ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕರು, ಕೆಪಿಸಿಸಿ ಅಧ್ಯಕ್ಷರು ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ ಪಕ್ಷದ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಶಾಸಕರು ಮನಬಂದಂತೆ ಹೇಳಿಕೆ ಕೊಡಬಾರದು ಅಧಿವೇಶನದಲ್ಲಿ ವಿಜಯನಗರ ಜಿಲ್ಲೆ ಬಗ್ಗೆ ಚರ್ಚಿಸಬೇಕು ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ ನಾಗೇಂದ್ರ ಅವರು ಹೇಳಿಕೆ ನೀಡಿದ್ದಾರೆ.
ವಿಜಯನಗರ ನೂತನ ಜಿಲ್ಲೆ ಬಗ್ಗೆ ಬಳ್ಳಾರಿ ಜಿಲ್ಲೆಯ ಬಿಜೆಪಿ ನಾಯಕರಾದ ಸೋಮಶೇಖರ್, ಶ್ರೀರಾಮುಲು ವಿರೋಧ ವ್ಯಕ್ತ ಪಡಿಸಿದ್ದು, ಇದ್ದೆ ನವಂಬರ್ 26 ನೇ ತಾರೀಕಿನಂದು ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಜಿಲ್ಲಾ ಹೋರಾಟ ಸಮಿತಿ ಬಳ್ಳಾರಿ ಬಂದ್ ಗೆ ಕರೆ ನೀಡಿದೆ.