Rainfall : ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆ Rainfall ಯಾಗುತ್ತಿದ್ದು, ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.
ರಾಜ್ಯಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ.
ಇದನ್ನೂ ಓದಿ: ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ಎಸ್‌ಬಿಐಎಫ್..!
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಇರಲಿದೆ.
ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು ರೈತರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. ಆದರೆ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್