ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ

Narendra Modi : ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಲಾ 2 ಲಕ್ಷ ರೂ ಪರಿಹಾರ (Compensation) ಘೋಷಿಸಿದ್ದಾರೆ. ಹೌದು, ಬೆಂಗಳೂರಿನಲ್ಲಿ…

Narendra Modi : ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಲಾ 2 ಲಕ್ಷ ರೂ ಪರಿಹಾರ (Compensation) ಘೋಷಿಸಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಭಾರಿ ಮಳೆಗೆ 6 ಅಂತಸ್ತಿನ ನಿರ್ಮಾಣ ಹಂತದಲ್ಲಿದ ಬೃಹತ್ ಕಟ್ಟಡ ಕುಸಿದಿತ್ತು. ಇದರಲ್ಲಿ ಈಗಾಗಲೇ 8 ಜನ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಇದೀಗ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದ್ದು, ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ.& ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ.

Vijayaprabha Mobile App free

ಇನ್ನು, ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ಅವರು ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.