ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದಿರುವ ಸಿಎಂ ಯಡಿಯೂರಪ್ಪ, ಸದ್ಯ ಪ್ರಧಾನಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ. ಅವರು ಹೇಳಿದರೆ ರಾಜ್ಯದಲ್ಲೂ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕೊರೋನಾ ತಡೆಗೆ ಕರ್ನಾಟಕದಲ್ಲಿ ಈಗಾಗಲೇ 14 ದಿನಗಳ ಜನತಾ ಕರ್ಪ್ಯೂ ವಿಧಿಸಲಾಗಿದೆ. ಇನ್ನು, ದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಪ್ರಧಾನಿ ಮೋದಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ದೇಶಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.