ಬೆಂಗಳೂರು: ಈ ತಿಂಗಳ ಕೊನೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ, ರಾಜ್ಯದ ಬಹುತೇಕ ಎಲ್ಲಾ ಕಡೆ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಜೂನ್ ಮೊದಲ ವಾರ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಸ್ತುತ ರಾಜ್ಯದ ಕರಾವಳಿ ಭಾಗದ ವಿವಿಧ ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು ಮೇ.29ರವರೆಗೂ ಮಳೆ ಮುಂದುವರಿಯಲಿದ್ದು, ಜೊತೆಗೆ ಉತ್ತರ ಒಳನಾಡು & ದಕ್ಷಿಣ ಒಳನಾಡಿನ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನ ಹವಾಮಾನ ವರದಿ:
ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇನ್ನು, ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.