ಬೆಂಗಳೂರು: ಮಹತ್ವದ ಸುದ್ದಿಗೋಷ್ಟಿ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಹೌದು, ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟು ಅನಾಥರಾದ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಈ ಅನಾಥ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಇನ್ನು, ಈ ಸಹಾಯಧನ ಮಕ್ಕಳನ್ನು ನೋಡಿಕೊಳ್ಳುವ ಈ ಸಂಸ್ಥೆಗಳಿಗೆ ತಲುಪಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.