BPL cards cancelled | ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವಿಶೇಷ ಅಭಿಯಾನದಿಂದ ಕೇವಲ ಎರಡು ತಿಂಗಳ ಅವಧಿಯಲ್ಲಿ 7,680 ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.
ಹೌದು, ಈ ಪ್ರಕ್ರಿಯೆಯಲ್ಲಿ ಖಾಸಗಿ ಶಾಲೆಗಳು, ಕಾಲೇಜುಗಳು, ಸಹಕಾರಿ ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳಲ್ಲಿ ತಿಂಗಳಿಗೆ ಕೇವಲ 11,000 ರೂಪಾಯಿ ಸಂಬಳ ಪಡೆಯುವ ಸಿಬ್ಬಂದಿಗಳ ಬಿಪಿಎಲ್ ಕಾರ್ಡ್‌ಗಳನ್ನೂ ರದ್ದುಪಡಿಸಲಾಗುತ್ತಿದೆ. ರಾಜ್ಯಾದ್ಯಂತ ಈ ಅಭಿಯಾನ ತೀವ್ರಗತಿಯಲ್ಲಿ ನಡೆಯುತ್ತಿದೆ. ರಾಜ್ಯದಲ್ಲಿ ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ರದ್ದಾಗಿರುವ ಮಾಹಿತಿ ಲಭ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ಅನರ್ಹ ಎಂದು ಪರಿಗಣಿಸಲಾದ ಕುಟುಂಬಗಳ ಕಾರ್ಡ್‌ಗಳನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗುತ್ತಿದೆ.



