ರಾಜ್ಯದಲ್ಲಿ ಬರೋಬ್ಬರಿ 3.30 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದುಗೊಳಿಸಿ,11.91 ಕೋಟಿ ರೂ ದಂಡ ವಿಧಿಸಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ತಿಳಿಸಿದೆ.
ಹೌದು, ರಾಜ್ಯದಲ್ಲಿ 3.30 ಲಕ್ಷಕ್ಕೂ ಹೆಚ್ಚು ಅನರ್ಹ ರೇಷನ್ ಕಾರ್ಡ್ ರದ್ದುಗೊಳಿಸಿದ್ದು, ಕೆಲವು ಕಾರ್ಡ್‌ಗಳನ್ನು APL ಆಗಿ ಪರಿವರ್ತಿಸಲಾಗಿದೆ. ಹಲವರು ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸರ್ಕಾರದ ಸವಲತ್ತು ಪಡೆಯುತ್ತಿದ್ದಾರೆ. ಅಂತವರಿಗೆ ಕಾರ್ಡ್ ಹಿಂದಿರುಗಿಸಲು ನೋಟಿಸ್ ನೀಡಲಾಗುತ್ತದೆ.
ಒಂದು ವೇಳೆ, 7 ದಿನದಲ್ಲಿ ಉತ್ತರ ನೀಡದಿದ್ದರೆ ಶಿಸ್ತುಕ್ರಮ ಕೈಗೊಂಡು, ಅವರು ಪಡೆದಿದ್ದ ಆಹಾರ ಆಧರಿಸಿ ಕೆಜಿ.ಗೆ 35 ರೂನಂತೆ ದಂಡ ವಿಧಿಸಲಾಗುತ್ತದೆ ಎಂದು ಆಹಾರ ಇಲಾಖೆ ತಿಳಿಸಿದೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.