ದಾವಣಗೆರೆ: ಹೆರಿಗೆಗೆ ಬಂದಿದ್ದ ತಾಯಿ-ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದ್ದು, ಆಸ್ಪತ್ರೆಯ ಸುತ್ತ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಕಾವ್ಯ(21) ಮೃತಪಟ್ಟ ವ್ಯಕ್ತಿಯಾಗಿದ್ದು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿಯಾಗಿದ್ದು, ಭಾನುವಾರ ರಾತ್ರಿ ಹೆರಿಗೆಗೆಂದು ದಾವಣಗೆರೆ ನಗರದ ಚಿಗಟೇರಿ ಆಸ್ಪತ್ರೆಗೆ ಬಂದಿದ್ದರು. ಆದರೆ, ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾಗಿದ್ದ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ವಹಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಮೃತ ಕಾವ್ಯ ಸಂಬಂದಿಕರು ಆರೋಪಿಸಿದ್ದು, ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಹೀಗಾಗಿ ಆಸ್ಪತ್ರೆಯ ಸುತ್ತ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.