ಮಕ್ಕಳಿಗೆ ವಿಷ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ; ಮಾಗಡಿಯಲ್ಲಿ ಘೋರ ದುರಂತ

ರಾಮನಗರ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾಗಡಿ ತಾಲ್ಲೂಕು ರೈತ ಸಂಘದ…

mother who poisoned her children and committed suicide

ರಾಮನಗರ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮಾಗಡಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಅವರ ಪತ್ನಿ ರೂಪಾ(38) ಅವರ ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಪೂರ್ತಿ ಎಂದು ತಿಳಿದು ಬಂದಿದೆ.

ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದ ತಮ್ಮ ಜಮೀನಿನ ಬಳಿ ಮೊದಲು ಮಕ್ಕಳಿಗೆ ವಿಷವುಣಿಸಿ ನಂತರ ತಾನು ವಿಷ ಸೇವಿಸಿ ಧಾರುಣವಾಗಿ ಮೃತರಾಗಿದ್ದಾರೆ. ಇನ್ನು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.