ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾಗಿದ್ದ ಚಾಲಕನಿಗೆ ₹ 10 ಸಾವಿರ ದಂಡ ಮತ್ತು ಆರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿ ಹಿರಿಯ ನ್ಯಾಯಧೀಶೆ ಎಂ. ಭಾರತಿ ಆದೇಶ ನೀಡಿದ್ದಾರೆ.
ಹೌದು, ಯರಬಾಳು ಗ್ರಾಮದ ರಸ್ತೆಯಲ್ಲಿ ಅತಿ ವೇಗವಾಗಿ ಲಾರಿಯನ್ನು ಚಲಾಯಿಸಿಕೊಂಡು ಬಂದು, ಮೋಟರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಆನಂದಪ್ಪ ಎಂಬುವರು ಸಾವನ್ನಪ್ಪಿದ್ದರು.
ಇನ್ನು, ಆರೋಪಿ ಚಾಲಕನ ವಿರುದ್ಧ ಅಂದಿನ ಸಿಪಿಐ ಮುದ್ದರಾಜ್ ದೋಷಾರೋಪಣೆ ಸಲ್ಲಿಸಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಎನ್. ಮೀನಾಕ್ಷಿ ಅವರು ವಾದ ಮಂಡಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.