ವಾಹನ ಸವಾರರೇ ಎಚ್ಚರ… ತಪ್ಪಿದ್ರೆ ₹1000 ದಂಡ!; ಯಾವ ಸಂಚಾರಿ ನಿಯಮ ಉಲ್ಲಂಘನೆಗೆ ಎಷ್ಟು ದಂಡ? ಇಲ್ಲಿದೆ ನೋಡಿ

ಬೆಂಗಳೂರು: ಇಂದಿನಿಂದ ಸಂಚಾರ ಪೂರ್ವ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ…

New traffic rules vijayaprabha

ಬೆಂಗಳೂರು: ಇಂದಿನಿಂದ ಸಂಚಾರ ಪೂರ್ವ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮತ್ತು ಸೀಟ್ ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಯಾವ ಸಂಚಾರಿ ನಿಯಮ ಉಲ್ಲಂಘನೆಗೆ ಎಷ್ಟು ದಂಡ?

Vijayaprabha Mobile App free

*ಹೆಲ್ಮೆಟ್ ಧರಿಸದೇ ವಾಹನ ಚಾಲನೆ- ರೂ.500 ದಂಡ

*ಹಿಂಬದಿ ಸವಾರ ಹೆಲ್ಮೆಟ್ ಧರಿಸದೇ ವಾಹನ ಸವಾರಿ- ರೂ.500 ದಂಡ

*ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ- ರೂ.500 ದಂಡ

*ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ- ರೂ.1,000 ದಂಡ

*ಅಜಾಗರೂಕತೆ, ಅಪಾಯಕಾರಿ ವಾಹನ ಚಾಲನೆ- ರೂ.1,000 ದಂಡ

*ನಿಷೇದಿತ, ನಿರ್ಬಂಧಿತ ವಲಯಗಳಲ್ಲಿ ಹಾರ್ನ್ ಬಳಕೆ- ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ರೂ.500, ಇತರೆ ವಾಹನಗಳಿಗೆ ರೂ.1,000

*ತುರ್ತು ಸೇವಾ ವಾಹನಗಳಿಗೆ ದಾರಿಕೊಡಲು ವಿಫಲ-ರೂ.1,000 ದಂಡ ವಿಧಿಸಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.