ಹೊನ್ನಾಳಿ: ತಾಕತ್ತಿದ್ದರೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ , ಶಾಸಕ ಎಂಪಿ ರೇಣುಕಾಚಾರ್ಯ ಅವರು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಸವಾಲು ಹಾಕಿದ್ದಾರೆ.
ಹೊನ್ನಾಳಿ ತಾಲೂಕಿನ ಹೊಳೆಹರಹಳ್ಳಿಯಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಂಪಿ ರೇಣುಕಾಚಾರ್ಯ ಅವರು, ಯಡಿಯೂರಪ್ಪ ಅವರು ಮಕ್ಕಳನ್ನು ಇಟ್ಟುಕೊಂಡು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದೀಯಲ್ಲಾ ಯತ್ನಾಳ್. ನೀನು ನಿನ್ನ ಮಗನನ್ನು ಇಟ್ಟುಕೊಂಡು ಕೆಲಸ ಮಾಡುತ್ತೀಯಲ್ಲ, ಹಾಗಾದರೆ ನೀನು ಭ್ರಷ್ಟನೇ ಎಂದು ಯತ್ನಾಳ್ ವಿರುದ್ಧ ಏಕವಚನದಲ್ಲೇ ಗುಡುಗಿದರು.
ಇನ್ನು ನಿನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದಾಗ ಪುನಃ ಪಕ್ಷಕ್ಕೆ ಕರೆತಂದವರು ಇದೇ ಯಡಿಯೂರಪ್ಪ ಅವರು ಎಂದು ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಅವರು ವಾಗ್ದಾಳಿ ನಡೆಸಿದರು.