ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊನೆಗೂ ದೃಢವಾದ ಕೊರೊನಾ ಸೋಂಕು; ಹತ್ತನೇ ಬಾರಿ ಪರೀಕ್ಷೆ ಮಾಡಿಸಿ ಕ್ವಾರನ್ಟೈನ್ ಆದ ಶಾಸಕ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಾಸಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ‌ಎಂ.ಪಿ.ರೇಣುಕಾಚಾರ್ಯ ಅವರು ಹತ್ತನೇ ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ್ದು, ಸೋಂಕು ದೃಢವಾಗಿದೆ. ಈ ಕುರಿತು ಸ್ವತಃ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರೇ…

mp renukacharya vijayaprabha

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಾಸಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ‌ಎಂ.ಪಿ.ರೇಣುಕಾಚಾರ್ಯ ಅವರು ಹತ್ತನೇ ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ್ದು, ಸೋಂಕು ದೃಢವಾಗಿದೆ.

ಈ ಕುರಿತು ಸ್ವತಃ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರೇ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹತ್ರನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

Vijayaprabha Mobile App free

ಎಲ್ಲಾ ರೀತಿಯ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನನ್ನ ಸರ್ಕಾರಿ ನಿವಾಸದಲ್ಲಿ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಿರಂತರ ಜನಸೇವೆ ಮಾಡುವೆ

ನಾನು ಸಹ ಒಬ್ಬ ಕೊರೊನಾ ವಾರಿಯರ್ ಆಗಿ ಕಳೆದ ಆರು ತಿಂಗಳುಗಳಿಂದ ಕೋವಿಡ್19ರ ವಿರುದ್ಧ ನಿರಂತರ ಜನಸೇವೆ ಮಾಡುತ್ತಿದ್ದು, ನನ್ನ ಮತ ಕ್ಷೇತ್ರದ ಜನರು, ನಿಮ್ಮ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಮುಖಾಂತರ ನನ್ನನ್ನು ಸಂಪರ್ಕಿಸ ಬಹುದು ಎಂದು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ, ನನ್ನ ಆರೋಗ್ಯದ ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮವು ನನಗೆ ಅಷ್ಟೇ ಮುಖ್ಯವಾಗಿದೆ ಎಂದು ಎಂ.ಪಿ.ರೇಣುಕಾಚಾರ್ಯ ಅವರು ತಿಳಿಸಿದ್ದಾರೆ.

ಒಂಭತ್ತು ಬಾರಿ ನೆಗೆಟಿವ್ ವರದಿ

ಕೊರೊನಾ ಆರಂಭದಿಂದ ಈವರೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಒಂಭತ್ತು ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿತ್ತು. ಈ ಕುರಿತ ಸುದ್ದಿಗಳು ಪತ್ರಿಕೆಯಲ್ಲಿ ವರದಿಯಾಗುತ್ತಿದ್ದವು. ಕೊನೆಗೆ ಈಗ ಹತ್ತನೇ ಬಾರಿ ಪಾಸಿಟಿವ್ ವರದಿ ಬಂದಿದೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.