ಯಾವುದೇ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳುತ್ತಾ ಬಂದಿರುವ ಮಂಡ್ಯ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಷ್ ಬಿಜೆಪಿ ಸೇರಲು ತೆರೆಮರೆಯಲ್ಲಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. ಅಕ್ಟೋಬರ್ನಲ್ಲಿ ರಾಷ್ಟ್ರ ನಾಯಕರ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ಬಿಜೆಪಿ ಪಕ್ಷ ಸೇರುವಂತೆ ಸಂಸದೆ ಸುಮಲತಾಗೆ ಈ ಹಿಂದೆಯೇ ಆಫರ್ ಬಂದಿತ್ತು. ಹಿರಿಯ ನಟ ಅಂಬರೀಷ್ ನಿಧನದ ಬಳಿಕ ಮಂಡ್ಯ ಲೋಕಸಭೆಯಿಂದ ನಿಖಿಲ್ ಕುಮಾರಸ್ವಾಮಿ ಎದುರು ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.